ಏನೆಂದು ಕೊಂಡಾಡಿ ಸ್ತುತಿಸಲೋ ದೇವನಾನೇನು
ಬಲ್ಲೆ ನಿನ್ನ ಮಹಿಮೆಗಳ ಮಾಧವ ||pa||
ಹರಿಮುಕುಂದನು ನೀನು ನರಜನ್ಮ ಹುಳು ನಾನುಪರಮಾತ್ಮನು ನೀನು ಪಾಮರನು ನಾನು
ಗರುಡ ಗಮನನು ನೀನು ಮರುಳು ಪಾಪಿಯು ನಾನುಪರಂಜ್ಯೋತಿಯು ನೀನು ದುರುಳ ತಿರುಕನು ನಾನು ||1||
ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನು
ಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು||2||
ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನು
ವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು ||3||
ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನು
ಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು||4||
ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನು
ಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು||5||
enendu kondadi stutisalo deva nanenu
balle nimma mahimegala madhava || pa ||
hari mukundanu ninu narajanma
hulunanu paramatma ninu pamaranu nanu
garudagamananu ninu marulu papiyu nanu
parama jyotiyu ninu tirupeyava nanu || 1 ||
kanbadali banda ananda muruti ninu
nanbike yillada prapanciganu nanu
anbarishage olida akrura saka ninu
danbakarmiyu nanu nirjitanu nanu || 2 ||
tirupati vasa sri venkatesanu ninu
smarisi ninnaya padava badukuvanu nanu
birudullavanu ninu morehokkenai nanu
siri kagi neleyadi keshavanu ninu || 3 ||
Can you confirm in which raaga this song is sung by Puttur Narasimha Nayak?
LikeLike
I don’t have any idea about music
LikeLike