ಕೃಷ್ಣ ಬಾರೊ ಕೃಷ್ಣ ಬಾರೋ
ಕೃಷ್ಣಯ್ಯ ನೀ ಬಾರಯ್ಯ ||ಪ||
ಸಣ್ಣ ಹೆಜ್ಜೆಯನಿಟ್ಟು ಗೆಜ್ಜೆನಾದಗಳಿಂದ ||ಅ||
ಮನ್ಮಥಜನಕನೆ ಬೇಗನೆ ಬಾರೊ
ಕಮಲಾಪತಿ ನೀ ಬಾರೊ
ಅಮಿತಪರಾಕ್ರಮ ಶಂಕರ ಬಾರೊ
ಕಮನೀಯ ಗಾತ್ರನೆ ಬಾರಯ್ಯ ದೊರೆಯೆ ।।೧।।
ಸುರುಳು ಕೇಶಗಳ ಒಲಿವ ಅಂದ
ಭರದ ಕಸ್ತೂರಿ ತಿಲಕದ ಚಂದ
ಶಿರದಿ ಒಪ್ಪುವ ನವಿಲುಕಣ್ಗಳಿಂದ
ತರತರದ ಆಭರಣಗಳ ಧರಿಸಿ ನೀ ಬಾರೊ ।।೨।।
ಹಾಲುಬೆಣ್ಣೆಗಳ ಕೈಯಲಿ ಕೊಡುವೆ
ಮೇಲಾಗಿ ಭಕ್ಷ್ಯಗಳ ಮುಚ್ಚಿಟ್ಟು ತರುವೆ
ಜಾಲ ಮಾಡದೆ ಬಾರಯ್ಯ ಮರಿಯೆ
ಬಾಲ ಎನ್ನ ತಂದೆ ಪುರಂದರವಿಠಲ ।।೩।।
Krushna baro krushna baro
Krushnayya ni barayya ||pa||
Sanna hejjeyanittu gejjenadagalinda ||a||
Manmathajanakane begane baro
Kamalapati ni baro
Amitaparakrama Sankara baro
Kamaniya gatrane barayya doreye ||1||
Surulu kesagala oliva anda
Barada kasturi tilakada chanda
Siradi oppuva navilukangalinda
Taratarada abaranagala dharisi ni baro ||2||
Halubennegala kaiyali koduve
Melagi bakshyagala mucchittu taruve
Jala madade barayya mariye
Bala enna tande purandaravithala ||3||
3 thoughts on “Krushna baro krushna baro”