ಭಾಗ್ಯದ ಲಕ್ಷ್ಮೀ ಬಾರಮ್ಮ |
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮೀ ಬಾರಮ್ಮ ||
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ |
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧ ||
ಕನಕವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೋರೆ |
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ || ೨ ||
ಅತ್ತಿತ್ತಲಗದೆ ಭಕ್ತರ ಮನೆಯಲಿ
ನಿತ್ಯ ಮಹೋತ್ಸವ ನಿತ್ಯ ಸುಮಂಗಳ |
ಸತ್ಯವ ತೋರುವ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿ ಬೊಂಬೆ || ೩ ||
ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುವುತ ಬಾರೆ |
ಕುಂಕುಮಾಂಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ || ೪ ||
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ |
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ || ೫ ||
Bhagyada lakshmi baramma nammamma ni sau|
Bhagyada lakshmi baramma||
Hejjaya mele hhejjeyanikkuta gejje kalgala dhvaniya madutha
sajjana sadhu pujeya velege majjigeyolagina benneyante||1||
Kanaka vrstiya kareyuta bare mana kamanaya siddhiya tore
dinakara koti tejadi holeva janakarayana kumari bega||2||
Attittalagalade bhaktara maneyali nitya mahotsava nitya sumangala
satyava toruva sadhu sajjanara cittadi holeva puttali bombe||3||
Sankhye illada bhagyava kottu kankana kaiya tiruvuta bare
kunkumankite pankaja locane venkataramanana binkada rani||4||
Sakkare tuppada kaluve harisi shukravaradha pujaya velage
akkareyulla alagiri rangana cokka purandara vithalana rani||5||